ADVERTISEMENT

ಮನೆ, ಅಂಗಡಿಗಳ ಮೇಲೆ ಕಲ್ಲುತೂರಾಟ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2018, 15:50 IST
Last Updated 9 ಡಿಸೆಂಬರ್ 2018, 15:50 IST

ಶಿವಮೊಗ್ಗ: ವಾಸವಿ ಶಾಲೆ ಆವರಣದಲ್ಲಿ ವಿಶ್ವ ಹಿಂದು ಪರಿಷತ್ ಭಾನುವಾರ ಆಯೋಜಿಸಿದ್ದ ರಾಮಮಂದಿರ ನಿರ್ಮಾಣಕ್ಕಾಗಿ ಜನಾಗ್ರಹ ಸಭೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರುಮುಸ್ಲಿಮರಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ನಗರದಲ್ಲಿ ಕೆಲ ಸಮಯ ಉದ್ವಿಗ್ನದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಬಂದ ಕೆಲವರು ಮನೆ, ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಮಕ್ಕಳು, ಮಹಿಳೆಯರು ಗಾಬರಿಗೊಂಡಿದ್ದಾರೆ ಎಂದು ಮಲ್ಲಿಕಾರ್ಜುನ ಚಿತ್ರಮಂದಿರದ ಸುತ್ತಲ ನಿವಾಸಿಗಳು ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ.

ಗಾಂಧಿ ಬಜಾರ್ ಸುತ್ತಲ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದ್ದು, ಕುಚೇಷ್ಟೆ ನಡೆಸುವ ಪಡ್ಡೆಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ADVERTISEMENT

ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಸೂಕ್ತ ರಕ್ಷಣೆ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಮುಖಂಡರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.