ರಿಪ್ಪನ್ ಪೇಟೆ : ಗ್ರಾಮದ ವಿನಾಯಕನಗರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ ಎಂಟನೇ ವರ್ಷದ ಗಣಪನ ರಾಜಭೀದಿ ಉತ್ಸವ ಶುಕ್ರವಾರ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ಪ್ರತಿಷ್ಟಾಪನೆ ಮಾಡಿ, ಸಾಂಪ್ರದಾಯಿಕ ಪೂಜೆ ಪುನಸ್ಕಾರ ನೆರವೇರಿದವು.
ವಿಸರ್ಜನಾ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಡ್ರಂ ಸೆಟ್, ಗೊಂಬೆ ಕುಣಿತ ಮೆರವಣಿಗೆಗೆ ಮೆರಗು ನೀಡಿತು. ರಾಜ ಬೀದಿ ಉತ್ಸವದಲ್ಲಿ ಮಾತೆಯರು ಮಕ್ಕಳು ಹಾಗೂ ಯುವಕರು ಸೌಂಡ್ ಸಿಸ್ಟಮ್ ನ ನಾದಕ್ಕೆ ತಕ್ಕಂತೆ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದರು.
ವಿವಿಧ ಸಂಘ ಸಂಸ್ಥೆಗಳ ಹಲವು ಮುಖಂಡರು ಭಾಗಿಯಾಗಿದ್ದರು.
ತದನಂತರ ಕುಕ್ಕಳಲೆ ಹೊಂಡಲಗದ್ದೆ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.