ಶಿವಮೊಗ್ಗ: ಶುಂಠಿ ಬೆಳೆಯ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 4 ವರ್ಷಗಳ ಕಠಿಣ ಶಿಕ್ಷೆ, ₹20 ಸಾವಿರ ದಂಡ ವಿಧಿಸಿದೆ.
ಶಿಕಾರಿಪುರ ತಾಲ್ಲೂಕು ಹುಣಸೆಕಟ್ಟೆಯ ಈಶ್ವರ (44) ಶಿಕ್ಷೆಗೆ ಒಳಗಾದ ಆರೋಪಿ.
ಗುಡ್ಡದಹೊಸಳ್ಳಿ ಜಮೀನಿನಲ್ಲಿ ₹71 ಸಾವಿರ ಮೌಲ್ಯದ ಗಾಂಜಾ ಬೆಳೆದಿದ್ದರು. ಡಿವೈಎಸ್‌ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ದಾಳಿ ನಡೆಸಿ, ವಶಪಡಿಸಿಕೊಂಡಿತ್ತು. ಶಿಕಾರಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಚಾರಣೆ ನಡೆಸಿದ ಪ್ರಭಾವತಿ ಹಿರೇಮಠ ಅವರು ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ವಿ.ಜಿ.ಯಳಗೇರಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.