ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ದಿಂಡದಹಳ್ಳಿ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ ₹35,000 ಮೌಲ್ಯದ 13 ಕೆ.ಜಿ ತೂಕದ 28 ಹಸಿ ಗಾಂಜಾ ಗಿಡಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನ ಮಾಲೀಕ ದಿಂಡದಹಳ್ಳಿ ಗ್ರಾಮದ ಬಸವರಾಜ್ (34) ಎಂಬಾತನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಆರ್.ಆರ್.ಪಾಟೀಲ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.