ಶಿವಮೊಗ್ಗ: ಹೊಸನಗರ ತಾಲ್ಲೂಕಿನ ನಗರ ವಲಯ ಮತ್ತಿಕೈ ಮೀಸಲು ಅರಣ್ಯದಲ್ಲಿ ಕಳೆದ ಜನವರಿ 8 ರಂದು ಬೆಳಗಿನ ಜಾವ ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಣಿಕೆ ಮಾಡಿದ್ದ ಪ್ರಕರಣದಲ್ಲಿ ಮೂವರನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ವನ್ಯಜೀವಿ ಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವ ಇನ್ನೂ ಇಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲ್ಲೂಕಿನ ಮುಂಡಳ್ಳಿ ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಫ್, ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಶಿರೂರು ಗ್ರಾಮದ ಹಣಬರಕೇರಿ ನಿವಾಸಿ ಆಲಿಬಾಪು ಯಾಸೀನ್ ಹಾಗೂ ಬೈಂದೂರು ತಾಲ್ಲೂಕು ಶಿರೂರು ಗ್ರಾಮದ ಮದ್ದೋಡಿ ರೋಡ್ ಜೋಗೂರ್ ಕ್ರಾಸ್ ನಿವಾಸಿ ವಾಸಿಂ ಅಕ್ರಂ ಬಂಧಿತ ಆರೋಪಿಗಳು.
ಸಾಗರ ಡಿಸಿಎಫ್ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ಹೊಸನಗರ ಎಸಿಎಫ್ ಕೆ.ಬಿ. ಮೋಹನ್ ಕುಮಾರ್, ನಗರ ವಲಯ ಅರಣ್ಯಾಧಿಕಾರಿ ಸಂತೋಷ ಮಲ್ಲನಗೌಡ್ರು, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.