ADVERTISEMENT

ಗವಟೂರು ಶಾಲೆಯಲ್ಲಿ ಸಂತೆ; ವ್ಯಾಪಾರ ಬಲು ಜೋರು..!

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 3:07 IST
Last Updated 7 ಫೆಬ್ರುವರಿ 2026, 3:07 IST
ಗವಟೂರು ಶಾಲೆಯಲ್ಲಿ ನಡೆದ ಹಳ್ಳಿ ಸಂತೆ ವೀಕ್ಷಿಸುತ್ತಿರುವ ಅಧಿಕಾರಿಗಳು
ಗವಟೂರು ಶಾಲೆಯಲ್ಲಿ ನಡೆದ ಹಳ್ಳಿ ಸಂತೆ ವೀಕ್ಷಿಸುತ್ತಿರುವ ಅಧಿಕಾರಿಗಳು   

ರಿಪ್ಪನ್‌ಪೇಟೆ: ಇಲ್ಲಿನ ಗವಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಹಳ್ಳಿ ಸಂತೆಯಲ್ಲಿ ವಿದ್ಯಾರ್ಥಿಗಳ ವ್ಯಾಪಾರ ಜೋರಾಗಿತ್ತು.

ಓದಿನ ಜೊತೆ ವಿದ್ಯಾರ್ಥಿಗಳು ವ್ಯವಹಾರ ಜ್ಞಾನ ಬೆಳೆಸಿಕೊಳ್ಳಲಿ ಎಂಬ ಆಶಯದೊಂದಿಗೆ ಸಂತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಶಿಸ್ತು ಬದ್ಧ ಜೀವನ, ಶೈಕ್ಷಣಿಕ ಪ್ರಗತಿ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರುವ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗಳಿಗೇ ಮಕ್ಕಳನ್ನು ದಾಖಲಿಸಬೇಕು’ ಎಂದು ಮನವಿ ಮಾಡಿದರು.  

ADVERTISEMENT

ಎಸ್.ಡಿ.ಎಂ.ಸಿ.ಅಧ್ಯಕ್ಷ ಸೀತಾರಾಮ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಜಿ.ಡಿ.ಮಲ್ಲಿಕಾರ್ಜುನ, ಮಂಜುಳಾ ಕೇತಾರ್ಜಿ, ಗಣಪತಿ ಗವಟೂರು, ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಶಿವಮೂರ್ತಿ ಬೆಳ್ಳೂರು, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರು ಹಾಜರಿದ್ದರು.

ಗೌಟೂರು ಶಾಲಾ ಮಕ್ಕಳ ಹಳ್ಳಿ ಸಂತೆಯಲ್ಲಿ ಖರೀದಿಸಿದ ದೊಡ್ಡ ಗಾತ್ರದ ಚೀನಿಕಾಯಿಯನ್ನು ತಲೆಯ ಮೇಲೆ ಹೊತ್ತು-ಯುತ್ತಿರುವ ಗ್ರಾಹಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.