ADVERTISEMENT

ಸಾಗರ: ಪಾಲಿಷ್ ಮಾಡುವ ನೆಪದಲ್ಲಿ ಮಾಂಗಲ್ಯ ಸರ ಕಳವು

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 5:01 IST
Last Updated 27 ಏಪ್ರಿಲ್ 2022, 5:01 IST

ಸಾಗರ: ತಾಲ್ಲೂಕಿನ ಕೋಟೆಕೊಪ್ಪ ಗ್ರಾಮದಲ್ಲಿ ಮಂಗಳವಾರ ಆಭರಣ ಪಾಲಿಷ್ ಮಾಡಿಕೊಡುವುದಾಗಿ ನಂಬಿಸಿ 40 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ.

ಗ್ರಾಮದ ಸರೋಜಮ್ಮ ಎಂಬುವವರಮನೆಗೆ ಹೋದ ಈ ಯುವಕರು ಮೊದಲು ಬೆಳ್ಳಿಯ ಗೆಜ್ಜೆಯನ್ನು ಪಾಲಿಷ್ ಮಾಡಿಕೊಟ್ಟಿದ್ದಾರೆ. ನಂತರ ಮಾಂಗಲ್ಯ ಸರವನ್ನು ಪಾಲಿಷ್ ಮಾಡುವುದಾಗಿ ಹೇಳಿ ಸರೋಜಮ್ಮ ಅವರಿಂದ ಅದನ್ನು ಪಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT