ADVERTISEMENT

ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಉತ್ತಮ ಮಳೆ, ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 12:33 IST
Last Updated 10 ಆಗಸ್ಟ್ 2020, 12:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನಲ್ಲಿ ಸೋಮವಾರ ಉತ್ತಮ ಮಳೆ, ಉಳಿದೆಡೆ ಸಾಧಾರಣ ಮಳೆಯಾಗಿದೆ.

ಪ್ರಮುಖ ಜಲಾಶಯಗಳ ಒಳ ಹರಿವಿನಲ್ಲಿ ಇಳಿಕೆಯಾಗಿದೆ. ತುಂಗಾ ಜಲಾಶಯದಿಂದ ನದಿಗೆ ಬಿಡುತ್ತಿರುವ ನೀರಿನ ಹರಿವೂ ಕಡಿಮೆಯಾಗಿದ್ದು, ತುಂಗಾ ನದಿಯ ಹರಿವು ತಗ್ಗಿದೆ.

ಮಳೆ, ಗಾಳಿಯಿಂದ 314 ವಿದ್ಯುತ್ ಕಂಬಗಳು ಉರುಳಿವೆ. ವಿದ್ಯುತ್ ಕಂಬಗಳಿಗೆ ಅಪಾಯ ತರುವ 940 ಅಕೇಶಿಯಾ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.

ADVERTISEMENT

ಮಲೆನಾಡಿನ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿವೆ. ಬೆಳೆ ಸೇರಿದಂತೆ ಹಾನಿ ಕುರಿತು ನಷ್ಟದ ಅಂದಾಜು ಮತ್ತು ಸ್ವರೂಪ ಸಿದ್ಧಪಡಿಸಿ, ಈ ತಿಂಗಳ 20ರ ಒಳಗೆ ಸಲ್ಲಿಸುವಂತೆ ಸಚಿವ ಈಶ್ವರಪ್ಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.