ADVERTISEMENT

ಕೊರತೆ ನಡುವೆಯೂ ಉತ್ತಮ ಫಲಿತಾಂಶ

ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2022, 5:36 IST
Last Updated 12 ಜೂನ್ 2022, 5:36 IST
ಸಾಗರದಲ್ಲಿ ಕರ್ನಾಟಕ ರಾಜ್ಯ ಬಡ್ತಿ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದಿಂದ ಶನಿವಾರ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಸಾಗರದಲ್ಲಿ ಕರ್ನಾಟಕ ರಾಜ್ಯ ಬಡ್ತಿ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದಿಂದ ಶನಿವಾರ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.   

ಸಾಗರ: ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ 265 ಶಿಕ್ಷಕರ ಕೊರತೆ ಇದೆ. 56 ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಇಂತಹ ಪ್ರತಿಕೂಲ ಸ್ಥಿತಿಯಲ್ಲೂ ತಾಲ್ಲೂಕಿನ ಬಡ್ತಿ ಮುಖ್ಯ ಶಿಕ್ಷಕರು ಹಾಗೂ ಪದವೀಧರೇತರ ಶಿಕ್ಷಕರ ಶ್ರಮ ಹಾಗೂ ಕಾಳಜಿಯಿಂದಾಗಿ ಈ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶ ಬಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ಮುಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿನ ಅಜಿತ ಸಭಾಭವನದಲ್ಲಿಕರ್ನಾಟಕ ರಾಜ್ಯ ಬಡ್ತಿ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ವತಿಯಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಕರ ಕೊರತೆ ಇರುವಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.ಕ್ಷೇತ್ರದ ಶಾಸಕರು ಶಿಕ್ಷಣ ಸಚಿವರ ಮೇಲೆ ಒತ್ತಡ ಹೇರಿದ ಕಾರಣ ಇದು ಸಾಧ್ಯವಾಗಿದೆ. ತಾಲ್ಲೂಕಿನ ಕರೂರು ಮತ್ತು ಭಾರಂಗಿ ಹೋಬಳಿಗಳಲ್ಲಿ ಅನೇಕ ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದವರು ತಮ್ಮ ಮೂಲ ಸ್ಥಳಕ್ಕೆ ವರ್ಗಾವಣೆಯಾಗಿರುವುದರಿಂದ ಶಿಕ್ಷಕರ ಕೊರತೆಯಾಗಿದೆ ಎಂದರು.

ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ. ಗಣಪತಪ್ಪ, ‘ಹಲವು ರೀತಿಯ ಒತ್ತಡಗಳ ನಡುವೆಯೂ ತಾಲ್ಲೂಕಿ
ನಲ್ಲಿ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಡ್ತಿ ಹಾಗೂ ಪದವೀಧರೇತರ ಮುಖ್ಯಶಿಕ್ಷಕರ ಶ್ರಮದಿಂದಾಗಿ ಈ ಭಾಗದ ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿದೆ’ ಎಂದು ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿ.ಟಿ. ಸ್ವಾಮಿ, ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಷ್ಟ್ರಮಟಕ್ಕೆ ಆಯ್ಕೆಯಾದ ಶಿಕ್ಷಕರು, ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಬಡ್ತಿ ಮುಖ್ಯಶಿಕ್ಷಕರ ಮಕ್ಕಳು, ನಿವೃತ್ತ ಬಡ್ತಿ ಮುಖ್ಯಶಿಕ್ಷಕರು, ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕರನ್ನುಸನ್ಮಾನಿಸಲಾಯಿತು.

ಸಂಘದ ಗೌರವಾಧ್ಯಕ್ಷ ನಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಧ್ಯಕ್ಷ ಬಸವರಾಜ ಹಿರೇಮಠ, ಸಹ ಕಾರ್ಯದರ್ಶಿ ಹಾಲಾನಾಯ್ಕ, ಪ್ರಮುಖರಾದ ಜಗನ್ನಾಥ್ಕೆ.ಮನೋಹರಪ್ಪ ಡಿ. ಮೂರ್ತಿ ಎಂ.ವೈ. ಮಾಲತೇಶ್ ಇದ್ದರು.

ಶೈಲಜಾ ಪ್ರಾರ್ಥಿಸಿದರು. ಎಂ.ವಿ.ಪ್ರಭು ಸ್ವಾಗತಿಸಿದರು. ರಮೇಶ್ ನಾರಾಯಣಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಪಿ. ಸತ್ಯನಾರಾಯಣನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.