ಒಡೆಯರಹತ್ತೂರು (ನ್ಯಾಮತಿ): ವೈಜ್ಞಾನಿಕವಾಗಿ ಶಿಫಾರಸ್ಸು ಮಾಡಿದ ರಸಗೊಬ್ಬರವನ್ನು ರೈತರು ಬಳಸಬೇಕು ಎಂದು ಹಿರೇಕಲ್ಮಠ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.
ತಾಲ್ಲೂಕಿನ ಒಡೆಯರಹತ್ತೂರು ಗ್ರಾಮದಲ್ಲಿ ಮಂಗಳವಾರ ಮೆಕ್ಕೆಜೋಳ ಬೆಳೆಗೆ ನ್ಯಾನೊ ಯೂರಿಯಾ ದ್ರಾವಣವನ್ನು ಡ್ರೋನ್ ಮೂಲಕ ಸಿಂಪಡಣೆ ಮಾಡುತ್ತಿರುವುದನ್ನು ವೀಕ್ಷಿಸಿ ಮಾತನಾಡಿದರು.
ಹರಳು ರೂಪದ ಯೂರಿಯಾಗೆ ಪರ್ಯಾಯವಾಗಿ ದ್ರವರೂಪದ ನ್ಯಾನೊ ಯೂರಿಯಾವನ್ನು ಅಭಿವೃದ್ಧಿಪಡಿಸಿದ್ದು, ರೈತರು ಇದನ್ನೇ ಹೆಚ್ಚಾಗಿ ಬಳಸಬೇಕು ಎಂದರು.
ಬೆಳೆಗಳಿಗೆ ಹರಳು ರೂಪದ ಯೂರಿಯಾ ರಸಗೊಬ್ಬರ ಪರ್ಯಾಯವಾಗಿ ದ್ರವ ರೂಪದ ನ್ಯಾನೊ ಯೂರಿಯಾ ಸಿಂಪಡಣೆ ಮಾಡಲು ರೈತರು ಮುಂದಾಗಬೇಕು. ನ್ಯಾನೊ ಯೂರಿಯಾ ಮತ್ತು ನ್ಯಾನೊ ಡಿಎಪಿ ಬಳಸಿದರೆ ಕಡಿಮೆ ಖರ್ಚಿನಲ್ಲಿ ಉತ್ತಮ ಇಳುವರಿ ಪಡೆಯಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕ ರೇವಣಸಿದ್ದನಗೌಡ ಎಚ್.ಕೆ. ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಬಿ.ಎನ್.ವಿಶ್ವನಾಥ ಮಾತನಾಡಿದರು.
ಕೋರಮಂಡಲ್ ಇಂಟರ್‌ನ್ಯಾಷನಲ್ (ಗ್ರೋಮೋರ್) ಕಂಪನಿಯ ಅಧಿಕಾರಿ ಸತೀಶ್ ಡ್ರೋನ್ ಮೂಲಕ ನ್ಯಾನೊ ಯೂರಿಯಾ ಸಿಂಪಡಣೆ ಮಾಡಿದರು.
ಕೃಷಿ ಅಧಿಕಾರಿ ಅತೀಕ್ ಉಲ್ಲಾ ಮತ್ತು ಸಿಬ್ಬಂದಿ, ಗ್ರಾಮದ ರೈತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.