ADVERTISEMENT

ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಹಕಾರ ನೀಡಿ: ಶಾಸಕ ಬಿ.ಕೆ.ಸಂಗಮೇಶ್ವರ್

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 5:44 IST
Last Updated 28 ಡಿಸೆಂಬರ್ 2025, 5:44 IST
ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಸಮಾರಂಭದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.
ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಸಮಾರಂಭದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.   

ಭದ್ರಾವತಿ: ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು  ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಶಾಲೆಗಳ ಬೆಳವಣಿಗೆಗೆ ಸಹಕಾರ ನೀಡಬೇಕೆಂದು ಶಾಸಕ ಬಿ.ಕೆ.ಸಂಗಮೇಶ್ವರ್ ಮನವಿ ಮಾಡಿದರು.

ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಇಂಗ್ಲಿಷ್‌ ಮತ್ತು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಸದುಪಯೋಗ ಪಡೆದುಕೊಂಡು ಶಿಕ್ಷಣದಲ್ಲಿ ಪ್ರಗತಿ ಸಾಧಿಸುವಂತೆ ತಿಳಿಸಿದರು.

ADVERTISEMENT

ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತ ಎನ್.ಕೆ. ಅಶೋಕ್, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳ ಜೊತೆಗೆ ಪೈಪೋಟಿ ಎದುರಿಸಿ ಉಳಿಯಬೇಕಾದರೆ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಕಲ್ಪಿಸಿಕೊಡುವ ಅವಶ್ಯಕತೆ ಇದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಘಟಕದ ಅಧ್ಯಕ್ಷ ಬಿ.ಎಸ್ ಗಣೇಶ್, ಗ್ರಾಮ ಪಂಚಾತಿಯಿ ಅಧ್ಯಕ್ಷೆ ಮಾಲತಿ ಶ್ರೀನಿವಾಸ್, ಸದಸ್ಯರಾದ ಚಂದ್ರಶೇಖರ್, ಸಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಂಪನ್ಮೂಲ ಸಮನ್ವಯಾಧಿಕಾರಿ ಎಚ್.ವಿ ಪಂಚಾಕ್ಷರಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶೋಭಾ, ಲಯನ್ಸ್ ಕ್ಲಬ್ ಅಧ್ಯಕ್ಷ ನಾಗರಾಜ್ ಶೇಟ್, ಗ್ರಂಥಾಲಯ ಮೇಲ್ವಿಚಾರಕಿ ಮಾಲಾ, ಕೃಷ್ಣಮೂರ್ತಿಪುಟ್ಟ ಲಕ್ಷ್ಮಮ್ಮ ಉಪಸ್ಥಿತರಿದ್ದರು.

ಎಸ್‌ಡಿಎಂಸಿ ಅಧ್ಯಕ್ಷ ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸುಮಾ ಸ್ವಾಗತಿಸಿ, ಮುಖ್ಯ ಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ನಿರೂಪಿಸಿದರು. ವಾಣಿಶ್ರೀ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.