ADVERTISEMENT

ಶಿವಮೊಗ್ಗ: ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2025, 16:07 IST
Last Updated 6 ಮಾರ್ಚ್ 2025, 16:07 IST

ಶಿವಮೊಗ್ಗ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿವೆ. ಸಾರ್ವಜನಿಕರು ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ತಿಳಿಸಿದರು. 

ಡಿಸೆಂಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಮಾರ್ಚ್ 3ರಂದು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜನವರಿ ತಿಂಗಳಿನ ಗೃಹಲಕ್ಷ್ಮಿ ಹಣ ಬಿಲ್ಲಿಂಗ್ ಆಗುತ್ತಿದೆ. ಈ ಬಾಕಿ ಹಣವನ್ನು ಕೂಡ ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಲಿದ್ದು, ನಂತರ ಫೆಬ್ರವರಿ ತಿಂಗಳ ಹಣ ಬಿಡುಗಡೆಯಾಗಲಿದೆ. ಆದ್ದರಿಂದ ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಇನ್ನು ಮುಂದೆ ನಗದು ಬದಲಿಗೆ 5 ಕೆ.ಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫೆಬ್ರುವರಿಯಿಂದಲೇ ಜಾರಿಗೆ ಬಂದಿದೆ. ಮಾರ್ಚ್ ತಿಂಗಳಿನಲ್ಲಿ ಒಟ್ಟು 15 ಕೆ.ಜಿ. ಅಕ್ಕಿ ಅನ್ನಭಾಗ್ಯ ಯೋಜನೆಯ ಪ್ರತಿ ಫಲಾನುಭವಿಗಳಿಗೆ ದೊರೆಯಲಿದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.