ADVERTISEMENT

ಶಿವಮೊಗ್ಗ | ಗೃಹಲಕ್ಷ್ಮೀ ಯಶೋಗಾಥೆಯ ವಿಡಿಯೊ ಮಾಡಿ: ಸಲಹೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 7:29 IST
Last Updated 1 ಆಗಸ್ಟ್ 2025, 7:29 IST
ಶಿವಮೊಗ್ಗದಲ್ಲಿ ಬುಧವಾರ ನಡೆದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಸಭೆಯ ನೋಟ
ಶಿವಮೊಗ್ಗದಲ್ಲಿ ಬುಧವಾರ ನಡೆದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಸಭೆಯ ನೋಟ   

ಶಿವಮೊಗ್ಗ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ನೆರವಿನಿಂದ ಆರ್ಥಿಕ ಚಟುವಟಿಕೆ ಕೈಗೊಂಡ ಕನಿಷ್ಠ 25 ಮಹಿಳಾ ಫಲಾನುಭವಿಗಳ ಯಶೋಗಾಥೆಯ ವಿಡಿಯೊ ಚಿತ್ರೀಕರಣ ಮಾಡುವಂತೆ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿಯ ಅಧ್ಯಕ್ಷ ಎಚ್.ಎಂ. ಮಧು ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಬುಧವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕೆಲವು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗದಿರುವ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಎನ್‌ಪಿಸಿಐ ದೋಷ ಹಾಗೂ ಕೆಲವು ಬ್ಯಾಂಕ್ ಖಾತೆಗಳಿಗೆ ಮೊಬೈಲ್ ಸಂಖ್ಯೆ ನೋಂದಣಿಯಾಗದೆ ಒಟಿಪಿ ಬಾರದೇ ಇರುವ ಕಾರಣಕ್ಕೆ ಹಣ ಜಮೆಯಾಗುತ್ತಿಲ್ಲ. ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿ ಖಾತೆ ತೆರೆಯುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಬಹುದು ಎಂದರು.

ADVERTISEMENT

ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ಮಾತನಾಡಿ, ಮೇ ತಿಂಗಳ ತನಕ ಶಿವಮೊಗ್ಗ ತಾಲ್ಲೂಕಿನಲ್ಲಿ ಯುವನಿಧಿ ಯೋಜನೆಯಡಿ ₹ 58,81,500 ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಸಮಿತಿಯ ಸದಸ್ಯ ಕಾರ್ಯದರ್ಶಿ ಎನ್.ತಾರಾ, ಸದಸ್ಯರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.