ADVERTISEMENT

ಶಿವಮೊಗ್ಗ: ಹಕ್ಕಿಪಿಕ್ಕಿ ಸಮುದಾಯದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 5:38 IST
Last Updated 11 ಅಕ್ಟೋಬರ್ 2025, 5:38 IST
ಶಿವಮೊಗ್ಗದಲ್ಲಿ ಶುಕ್ರವಾರ ಹಕ್ಕಿಪಿಕ್ಕಿ ಸಮುದಾಯದಿಂದ ನಡೆದ ಪ್ರತಿಭಟನೆಯ ನೋಟ
ಶಿವಮೊಗ್ಗದಲ್ಲಿ ಶುಕ್ರವಾರ ಹಕ್ಕಿಪಿಕ್ಕಿ ಸಮುದಾಯದಿಂದ ನಡೆದ ಪ್ರತಿಭಟನೆಯ ನೋಟ   

ಶಿವಮೊಗ್ಗ: ಮೈಸೂರಿನಲ್ಲಿ ಹಕ್ಕಿಪಿಕ್ಕಿ ಹರಣಿ ಶಿಕಾರಿ ಸಮುದಾಯದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಎಂದು ಕೋರಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

‘ಹಕ್ಕಿಪಿಕ್ಕಿ ಸಮುದಾಯದವರು ಹೊಟ್ಟೆಪಾಡಿಗಾಗಿ ಕಲಬುರಗಿ ಜಿಲ್ಲೆಯಿಂದ ಬಲೂನ್ ಮಾರಲು ಮೈಸೂರು ದಸರಾ ಮಹೋತ್ಸವಕ್ಕೆ ತೆರಳಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಬಾಲಕಿಯನ್ನು ದುಷ್ಕರ್ಮಿಗಳು ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಈ ಘಟನೆ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಜಗ್ಗು, ನಂಜುಂಡಸ್ವಾಮಿ, ಕುಮುದಾ, ಪ್ರಭು, ಸುರೇಂದ್ರ, ನೀಮ, ವಿನು, ಟಿ. ವೆಂಕಟೇಶ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.