ADVERTISEMENT

ಧಾರ್ಮಿಕ ಭಾವನೆಗೆ ಧಕ್ಕೆ; ಸಾಗರದಲ್ಲಿ ಭಗವಾನ್ ವಿರುದ್ಧ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 6:43 IST
Last Updated 23 ಜುಲೈ 2022, 6:43 IST
   

ಸಾಗರ: ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪಕ್ಕಾಗಿ ಸಾಹಿತಿ ಕೆ.ಎಸ್‌.ಭಗವಾನ್ ವಿರುದ್ಧ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಮೊಕದ್ದಮೆ ದಾಖಲಿಸಿದೆ.

ಭಗವಾನ್ ಅವರು ರಚಿಸಿರುವ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಅಂಶಗಳಿವೆ ಎಂದು ಇಕ್ಕೇರಿ ಗ್ರಾಮದ ಸಂಘ ಪರಿವಾರದ ಕಾರ್ಯಕರ್ತ ಮಹಾಬಲೇಶ್ವರ್ ಎಂಬುವವರು ಇಲ್ಲಿನ ನ್ಯಾಯಾಲಯದಲ್ಲಿ ಭಗವಾನ್ ವಿರುದ್ಧ 2019ರಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ ಬಗಾಡಿ ಪ್ರಕರಣ ದಾಖಲಿಸಿ ಆ. 30ಕ್ಕೆ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲು ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.