
ಪ್ರಜಾವಾಣಿ ವಾರ್ತೆ
ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಚಿನ್ನಿಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಆರ್‌ಎಂಎಲ್ ನಗರದ ನಿವಾಸಿಗಳನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಅಪಘಾತದಲ್ಲಿ ಒಬ್ಬರು ಸಾವಿಗೀಡಾಗಿದ್ದು, ಉಳಿದವರನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ವಿಶ್ವನಾಥ ಕಾಶಿ, ಯಮುನಾ ರಂಗೇಗೌಡ, ಜಾಮಿಯಾ ಮಸೀದಿಯ ಅಧ್ಯಕ್ಷ ಆಫ್ತಾಬ್ ಪರ್ವಿಜ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಚಿನ್ನಪ್ಪ, ರಂಗೇಗೌಡ, ನೂರುಲ್ಲಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.