ADVERTISEMENT

ಧ್ವಜಾರೋಹಣ ನೆರವೇರಿಸದ ಮುಖ್ಯ ಶಿಕ್ಷಕಿ ಅಮಾನತು

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2023, 20:13 IST
Last Updated 15 ಆಗಸ್ಟ್ 2023, 20:13 IST
   

ಶಿಕಾರಿಪುರ: ತಾಲ್ಲೂಕಿನ ಎಳನೀರುಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸದ ಮುಖ್ಯ ಶಿಕ್ಷಕಿ ಲಲಿತಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಶಶಿಧರ್ ಅಮಾನತು ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವ ದಿನದಂದು ಶಾಲೆಯಲ್ಲಿ ಧ್ವಜಾರೋಹಣ ನಡೆಸದಿರುವ ಬಗ್ಗೆ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು.

ಧ್ವಜಕಟ್ಟೆ ಸರಿ ಇಲ್ಲದೇ ಇರುವುದರಿಂದ ಧ್ವಜಾರೋಹಣ ನಡೆಸಲು ಸಾಧ್ಯವಾಗಿಲ್ಲ ಎಂದು ಮುಖ್ಯ ಶಿಕ್ಷಕಿ, ಕ್ಷೇತ್ರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಿದ್ದರು.

ADVERTISEMENT

‘ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಧ್ವಜಕಟ್ಟೆ ಸುಸ್ಥಿತಿಯಲ್ಲಿರುವುದು ಕಂಡುಬಂದಿದೆ. ಹೀಗಿದ್ದರೂ ಧ್ವಜಾರೋಹಣ ನಡೆಸದೇ ಕರ್ತವ್ಯ ಲೋಪ ಎಸಗಿದ್ದಾರೆ. ಹೀಗಾಗಿ ಅಮಾನತು ಮಾಡಲಾಗಿದೆ’ ಎಂದು ತಹಶೀಲ್ದಾರ್‌ ‘‍ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.