ಹೊಸನಗರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಹೆರಟೆ ಸೇತುವೆ ಸಮೀಪ ಮಂಗಳವಾರ ಮಧ್ಯಾಹ್ನ ನಡೆದಿದೆ.
ಅಲ್ಪಾಜ್ ಗಂಭೀರ ಗಾಯಗೊಂಡವರು. ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರು ಮತ್ತು ಮಾಸ್ತಿಕಟ್ಟೆಯಿಂದ ಕೊಡಚಾದ್ರಿ ಕಡೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಎರಡೂ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಳಿಕ ಕೊಡಚಾದ್ರಿಗೆ ಹೋಗುತ್ತಿದ್ದರು. ನಗರದಲ್ಲಿ ರಸ್ತೆ ತಪ್ಪಿ ಮಾಸ್ತಿಕಟ್ಟೆ ಹೋಗಿದ್ದರು. ಬಳಿಕ ವಾಪಸ್ ಬರುವ ವೇಳೆ ಅಪಘಾತವಾಗಿದೆ.
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.