ADVERTISEMENT

ಸಾಗರ: ಹೊಟ್ಟೆಯಲ್ಲಿದ್ದ 7 ಕೆ.ಜಿ. ಗಡ್ಡೆ ಹೊರಕ್ಕೆ

ಸರ್ಕಾರಿ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 18 ಮೇ 2022, 4:20 IST
Last Updated 18 ಮೇ 2022, 4:20 IST
ಸಾಗರದ ನೆಹರೂ ನಗರ ಬಡಾವಣೆಯ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆ.ಜಿ. ತೂಕದ ಗಡ್ಡೆಯನ್ನು ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದೆ.
ಸಾಗರದ ನೆಹರೂ ನಗರ ಬಡಾವಣೆಯ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆ.ಜಿ. ತೂಕದ ಗಡ್ಡೆಯನ್ನು ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದೆ.   

ಸಾಗರ: ಇಲ್ಲಿನ ನೆಹರೂ ನಗರ ಬಡಾವಣೆಯ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆ.ಜಿ. ತೂಕದ ಗಡ್ಡೆಯನ್ನು ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದೆ.

ಕಳೆದ ಮೇ 10ರಂದು ಹೊಟ್ಟೆ ನೋವಿನ ತಪಾಸಣೆಗೆಂದು ಮಹಿಳೆ ಆಸ್ಪತ್ರೆಗೆ ಬಂದಿದ್ದರು. ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ಅವರು ತಪಾಸಣೆ ನಡೆಸಿದಾಗ ಮಹಿಳೆಯ ಹೊಟ್ಟೆಯಲ್ಲಿ ದೊಡ್ಡ ಗಾತ್ರದ ಗಡ್ಡೆ ಬೆಳೆದಿರುವುದು ಪತ್ತೆಯಾಗಿತ್ತು.

ಡಾ.ನಾಗೇಂದ್ರಪ್ಪ, ಡಾ.ಸುಚಿತ್ರ, ಡಾ.ಸುಷ್ಮಾ, ಆರೋಗ್ಯ ಸಹಾಯಕರಾದ ನಾಗರತ್ನ, ಸುವರ್ಣ, ಚಂದ್ರು ತಂಡ ಮಂಗಳವಾರ ಶಸ್ತ್ರಚಿಕಿತ್ಸೆ ಮೂಲಕ ಗಡ್ಡೆಯನ್ನು ಹೊರತೆಗೆದಿದ್ದಾರೆ. ಮಹಿಳೆ ಈಗ ಆರೋಗ್ಯವಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.