ADVERTISEMENT

ರಿಪ್ಪನ್‌ಪೇಟೆ | ಸ್ವದೇಶಕ್ಕೆ ಮರಳಿದ ಎರಡೇ ದಿನದಲ್ಲಿ ಹೃದಯಾಘಾತ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 5:20 IST
Last Updated 12 ನವೆಂಬರ್ 2025, 5:20 IST
ಇಮ್ರಾನ್ 
ಇಮ್ರಾನ್    

ರಿಪ್ಪನ್‌ಪೇಟೆ: ಉದ್ಯೋಗದ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿ, ತಾಯ್ನಾಡಿಗೆ ಬಂದ ಎರಡೇ ದಿನದಲ್ಲಿ ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಗ್ರಾಮದ ಮದೀನಾ ಕಾಲೊನಿಯ ಇಮ್ರಾನ್ (36) ಮೃತ ವ್ಯಕ್ತಿ.

ಮೂರು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ ನಿರ್ವಹಿಸುತಿದ್ದ ಇವರು ಎರಡು ದಿನಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದರು.
ರಾತ್ರಿ ಮಕ್ಕಳೊಂದಿಗೆ ಊಟ ಮಾಡಿ, ಮಲಗಿದವರಿಗೆ ಮಂಗಳವಾರ ಮುಂಜಾನೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಶಿವಮೊಗ್ಗಕ್ಕೆ ಖಾಸಗಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ADVERTISEMENT

ಇವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಸಂಜೆ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.