ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಬಿರುಸುಗೊಂಡಿದೆ. ಮುಂಜಾಗರೂಕತಾ ಕ್ರಮವಾಗಿ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲ್ಲೂಕುಗಳ ಶಾಲೆ-ಕಾಲೇಜುಗಳಿಗೆ ಜುಲೈ 3ಂದು ಗುರುವಾರ ರಜೆ ಘೋಷಿಸಲಾಗಿದೆ.
ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲ್ಲೂಕಿನ ವಾರಾಹಿ ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಅಲ್ಲಿನ ಹುಲಿಕಲ್ ನಲ್ಲಿ 27 ಸೆಂ.ಮೀ, ಯಡೂರಿನಲ್ಲಿ 23.4, ಮಾಸ್ತಿಕಟ್ಟೆ 21.7, ಮಾಣಿ 20.7, ಸಾವೆಹಕ್ಲು 15.9 ಸೆಂ.ಮೀ ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.