ADVERTISEMENT

ಶಿವಮೊಗ್ಗ: ಬಿರುಸುಗೊಂಡ ಮಳೆ, ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ

ವಾರಾಹಿ ಯೋಜನಾ ಪ್ರದೇಶ ಮಾಣಿಯಲ್ಲಿ ಅತಿಹೆಚ್ಚು 30.7 ಸೆಂ.ಮೀ ಮಳೆ ದಾಖಲು

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 5:11 IST
Last Updated 16 ಜೂನ್ 2025, 5:11 IST
   

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಬಿರುಸುಗೊಂಡಿದೆ. ರಾತ್ರಿಯಿಡೀ ಸುರಿದ ಮಳೆ ಸೋಮವಾರ ಬೆಳಿಗ್ಗೆ ಕೆಲ ಹೊತ್ತು ಬಿಡುವು ಕೊಟ್ಟಿತ್ತು. ಮತ್ತೆ ಮುಂದುವರೆದಿದೆ.

ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಹೊಸನಗರ ತಾಲ್ಲೂಕಿನ ವಾರಾಹಿ ಜಲಾನಯನ ಪ್ರದೇಶದಲ್ಲಿ ದಾಖಲೆಯ ಮಳೆಯಾಗಿದೆ. ಮಾಣಿಯಲ್ಕಿ ಅತಿಹೆಚ್ಚು 30.7 ಸೆಂ.ಮೀ ಮಳೆ ಸುರಿದಿದ್ದು, ಹುಲಿಕಲ್ ನಲ್ಲಿ 27.9, ಸಾವೆಹಕ್ಲು 26.2, ಮಾಸ್ತಿಕಟ್ಟೆ 25.5 ಹಾಗೂ ಯಡೂರಿನಲ್ಲಿ 23.2 ಸೆಂ.ಮೀ ಮಳೆ ದಾಖಲಾಗಿದೆ.

ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ 21.7 ಸೆಂ.ಮೀ ಮಳೆ ಸುರಿದಿದೆ.

ADVERTISEMENT

ಜಲಾಶಯಗಳ ಒಳಹರಿವು ಹೆಚ್ಚಳ:

ಮಳೆ ಹೆಚ್ಚಳದಿಂದ ಜಲಾಶಯಗಳ ಒಳಹರಿವು ಹೆಚ್ಚಳಗೊಂಡಿದ್ದು, ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯಕ್ಕೆ ಈ ಮುಂಗಾರು ಹಂಗಾಮಿನಲ್ಲಿ ಅತಿ ಹೆಚ್ಚು ಒಳಹರಿವು 39.961 ಕ್ಯುಸೆಕ್ ದಾಖಲಾಗಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿ ಇದ್ದು, ಸದ್ಯ ಜಲಾಶಯದಲ್ಲಿ 1766.40 ಅಡಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ (ಜೂನ್ 15) ಜಲಾಶಯದಲ್ಲಿ 1745.25 ಅಡಿ ನೀರಿನ ಸಂಗ್ರಹ ಇತ್ತು.

ಲಕ್ಕವಳ್ಳಿಯ ಭದ್ರಾ ಜಲಾಶಯದಲ್ಲಿ ಒಳಹರಿವು 5417 ಕ್ಯುಸೆಕ್ ಇದೆ. 1170 ಕ್ಯುಸೆಕ್ ಹೊರಹರಿವು ಇದೆ. 186 ಅಡಿ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 144.9 ಅಡಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ 118.11 ಅಡಿ ನೀರಿನ ಸಂಗ್ರಹ ಇತ್ತು.

ಗಾಜನೂರಿನ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.