ಮಳೆ
(ರಾಯಿಟರ್ಸ್ ಚಿತ್ರ)
ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಒಂದು ದಿನ ರಜೆ ಘೋಷಣೆ ಮಾಡಿದ್ದಾರೆ.
ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ‘ಮಂಗಳವಾರ ಆರೆಂಜ್ ಅಲರ್ಟ್ ಮತ್ತು ಬುಧವಾರ ಯೆಲ್ಲೊ ಅಲರ್ಟ್ ನೀಡಿದೆ. ಆದ್ದರಿಂದ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಡಿ.3 ರಂದು ರಜೆ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.