ADVERTISEMENT

‘ಅಂಗವಿಕಲರಿಗೆ ಅನುಕಂಪಕ್ಕಿಂತ ನೆರವು ಮುಖ್ಯ’: ವಿಲ್ಸನ್ ಗೊನ್ಸಾಲ್ವಿಸ್

​ಪ್ರಜಾವಾಣಿ ವಾರ್ತೆ
Published 10 ಮೇ 2025, 15:50 IST
Last Updated 10 ಮೇ 2025, 15:50 IST
ಸಾಗರದಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿ ಹಾಗೂ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.
ಸಾಗರದಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿ ಹಾಗೂ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.   

ಸಾಗರ: ‘ಅಂಗವಿಕಲರ ಬಗ್ಗೆ ಕೇವಲ ಅನುಕಂಪ ತೋರಿಸುವುದರಿಂದ ಪ್ರಯೋಜನವಿಲ್ಲ. ಬದಲಾಗಿ ಅವರಿಗೆ ಸಕಾಲದಲ್ಲಿ ಅಗತ್ಯ ನೆರವು ನೀಡುವುದು ಮುಖ್ಯ’ ಎಂದು ಕೆಪಿಸಿಸಿ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಹೇಳಿದರು.

ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಗಾಲಿ ಕುರ್ಚಿ ಹಾಗೂ ಸಾಧನಾ ಸಲಕರಣೆಗಳನ್ನು ವಿತರಿಸಿ ಅವರು ಮಾತನಾಡಿದರು.

‘ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ನಂತರ ಕಾರ್ಮಿಕರಿಗೆ ಉಪಯುಕ್ತವಾಗುವ ಹಲವು ಹೊಸ ಯೋಜನೆಗಳನ್ನು ರೂಪಿಸಿದ್ದಾರೆ. ಬೇರೆ ಬೇರೆ ಕ್ಷೇತ್ರದವರನ್ನು ಕಾರ್ಮಿಕ ವಲಯಕ್ಕೆ ತರುವ ಮೂಲಕ ಈ ಕ್ಷೇತ್ರವನ್ನು ವಿಸ್ತರಿಸುವ ಕಾರ್ಯಕ್ಕೆ ಅವರು ಮುಂದಾಗಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ದೊರಕುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳಿಗೆ ಪ್ರಯೋಜನ ದೊರಕುವಂತೆ ಜಾಗೃತಿ ಮೂಡಿಸುವ ಕೆಲಸವನ್ನು ನಮ್ಮ ಸಂಘಟನೆ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಎನ್.ರವೀಂದ್ರ ಸಾಗರ್ ಹೇಳಿದರು.

ಪ್ರಮುಖರಾದ ಐ.ಎನ್.ಸುರೇಶ್ ಬಾಬು, ಆರ್ಥರ್ ಗೋಮ್ಸ್, ಕನ್ನಪ್ಪ, ಹರೀಶ್, ರೇಖಾ, ವಾಣಿ, ಗ್ರೇಸಿ ಡಯಾಸ್,ಡಿ. ದಿನೇಶ್, ವಿಜಯಕುಮಾರ್, ಪ್ರವೀಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.