ADVERTISEMENT

ಮಂಗಳೂರಿನಲ್ಲಿ ಬಾಂಬ್: ಶಿವಮೊಗ್ಗದಲ್ಲೂ ತಪಾಸಣೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 15:58 IST
Last Updated 21 ಜನವರಿ 2020, 15:58 IST
ಶಿವಮೊಗ್ಗ ಕೆಎಸ್ಆರ್‌ಟಿಸಿ ನಿಲ್ದಾಣದಲ್ಲಿ ಮಂಗಳವಾರ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.
ಶಿವಮೊಗ್ಗ ಕೆಎಸ್ಆರ್‌ಟಿಸಿ ನಿಲ್ದಾಣದಲ್ಲಿ ಮಂಗಳವಾರ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.   

ಶಿವಮೊಗ್ಗ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಹಲವೆಡೆ ಮಂಗಳವಾರ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.

ಕೆಎಸ್‌ಆರ್‌ಟಿಸಿ ನಿಲ್ದಾಣ, ಖಾಸಗಿ ಬಸ್‌ನಿಲ್ದಾಣ, ರೈಲು ನಿಲ್ದಾಣ ಹಾಗೂ ಜನನಿಬಿಡ ಪ್ರದೇಶಗಳಮಳಿಗೆಗಳು, ವಾಹನ ನಿಲುಗಡೆ ಸ್ಥಳಗಳು, ಪ್ಲಾಟ್‌ಫಾರಂ, ಲಗ್ಗೇಜ್ ರೂಂ ಮತ್ತಿತರ ಸ್ಥಳಗಳಲ್ಲಿ ನಾಲ್ಕೈದು ಗಂಟೆ ತಪಾಸಣೆ ನಡೆಸಿದರು. ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ಮಾಡಿದರು.

‘ಜಿಲ್ಲೆಯ ಎಲ್ಲ ಜನದಟ್ಟಣೆ ಪ್ರದೇಶಗಳಲ್ಲಿ ತಪಾಸಣಾ ಕಾರ್ಯಮುಂದುವರಿಯಲಿದೆ. ಅನುಮಾನಸ್ಪದ ಬ್ಯಾಗ್, ಚೀಲ, ಬೈಕ್, ಕಾರು, ವ್ಯಕ್ತಿಗಳ ಕುರಿತು ಮಾಹಿತಿ ಸಿಕ್ಕರೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ (94808 03300)ಗೆ ಮಾಹಿತಿ ನೀಡಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.