ADVERTISEMENT

ಹೊಳೆಹೊನ್ನೂರು | ಮಳೆಗೆ ಧರೆಗುರುಳುದ ಎರಡು ಮನೆಗಳು

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 14:40 IST
Last Updated 23 ಜುಲೈ 2024, 14:40 IST
ಹೊಳೆಹೊನ್ನೂರಿನ ಸಮೀಪದ ಅರಹತೊಳಲು ಗ್ರಾಮದಲ್ಲಿ ಮಳೆಗೆ ಮನೆ ಕುಸಿದಿರುವ ಸ್ಥಳಕ್ಕೆ ಗ್ರಾಮಡಳಿತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು
ಹೊಳೆಹೊನ್ನೂರಿನ ಸಮೀಪದ ಅರಹತೊಳಲು ಗ್ರಾಮದಲ್ಲಿ ಮಳೆಗೆ ಮನೆ ಕುಸಿದಿರುವ ಸ್ಥಳಕ್ಕೆ ಗ್ರಾಮಡಳಿತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು   

ಹೊಳೆಹೊನ್ನೂರು: ಸಮೀಪದ ಅರಹತೊಳಲು ಗ್ರಾಮದಲ್ಲಿ ರಾತ್ರಿ ಸುರಿದ ಮಳೆಗೆ ಎರಡು ಮನೆಗಳು ಧರೆಗುರುಳಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾತ್ರಿ 8 ಘಂಟೆ ಸಮಯದಲ್ಲಿ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಮನೆಯ ಗೋಡೆಗಳಿಂದ ಸಣ್ಣದಾಗಿ ಮಣ್ಣು ಕಳಚಿ ಬೀಳುತ್ತಿರುವುದನ್ನು ಗಮನಿಸಿದ ಮನೆಯವರು, ತಕ್ಷಣ ಮನೆ ಖಾಲಿ ಮಾಡಿದ್ದಾರೆ. ಮನೆಯ ಹಿಂದಿನ ಶೆಡ್‌ನಲ್ಲಿ ಆಶ್ರಯ ಪಡೆದಿದ್ದಾರೆ. ರಾತ್ರಿ 11 ಘಂಟೆ ಸುಮಾರಿಗೆ ಮನೆಯ ಚಾವಣಿ ಸಹಿತ ಗೋಡೆಗಳು ನೆಲಕ್ಕೆ ಉರುಳಿದೆ.

ವಿಷಯ ತಿಳಿಯುತ್ತಿದ್ದಂತೆ ಗ್ರಾಮ ಲೆಕ್ಕಾಧಿಕಾರಿ ಕಲ್ಯಾಣಿ ಬಸವರಾಜ್, ಪಿಡಿಓ ಜಿ.ಅನಿತಾ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.