ADVERTISEMENT

ನಿವೇಶನ ಖಾತೆ ಮಾಡಲು ಹೊಳೆಹೊನ್ನೂರು ಗ್ರಾಮಸ್ಥರಿಂದ ವಿರೋಧ

ಹೊಳೆಹೊನ್ನೂರು ಗ್ರಾಮಸ್ಥರಿಂದ ಶುಕ್ರವಾರ ಸಂಜೆ ದಿಢೀರ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 5:20 IST
Last Updated 17 ಸೆಪ್ಟೆಂಬರ್ 2022, 5:20 IST
ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಗೆ ಸಂಬಂಧಪಟ್ಟ ನಿವೇಶನವನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರಿಗೆ ಖಾತೆ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ನಂತರ ಮುಖ್ಯಾಧಿಕಾರಿ ಎಸ್.ಸತ್ಯನಾರಾಯಣರಾವ್ ಅವರಿಗೆ ಮನವಿಪತ್ರ ಸಲ್ಲಿಸಿದರು.
ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಗೆ ಸಂಬಂಧಪಟ್ಟ ನಿವೇಶನವನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರಿಗೆ ಖಾತೆ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ನಂತರ ಮುಖ್ಯಾಧಿಕಾರಿ ಎಸ್.ಸತ್ಯನಾರಾಯಣರಾವ್ ಅವರಿಗೆ ಮನವಿಪತ್ರ ಸಲ್ಲಿಸಿದರು.   

ಹೊಳೆಹೊನ್ನೂರು: ಸ್ಥಳೀಯ ಪಟ್ಟಣ ಪಂಚಾಯಿತಿಗೆ ಒಳಪಟ್ಟ ನಿವೇಶನವನ್ನು ಅಕ್ರಮವಾಗಿ ವ್ಯಕ್ತಿಯೊಬ್ಬರಿಗೆ ಖಾತೆ ಮಾಡುವುದನ್ನು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಂತೆ ಹೊಳೆಹೊನ್ನೂರಿನ ಆಸ್ತಿ ನಂ.452/2ರಲ್ಲಿ 40x50 ಅಡಿ ವಿಸ್ತೀರ್ಣದ ನಿವೇಶನ ಇದೆ. ಈ ನಿವೇಶನ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಖಾತೆ ಮಾಡಿಕೊಡುವ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಹಿಂದೆ
ನಡೆಸಿದ ಪಂಚಾಯಿತಿ ಸಭೆಯಲ್ಲಿ ಪಂಚಾಯಿತಿ ಸದಸ್ಯರ ವಿರೋಧ ಇರುವ ಬಗ್ಗೆ ಠರಾವು ಪುಸ್ತಕದಲ್ಲಿ ದಾಖಲಾಗಿದೆ.

ಪರಿಶೀಲನೆ ನಡೆಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮೇಲಧಿಕಾರಿ ಪತ್ರ ಬರೆದಿದ್ದಾರೆ. ಆದರೆ ಈ ಎಲ್ಲವನ್ನು ಉಲ್ಲಂಘನೆ ಮಾಡಿ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಅಕ್ರಮವಾಗಿ ಖಾತೆ ಮಾಡಿಕೊಡಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ADVERTISEMENT

ಬಳಿಕ ಯಾವುದೇ ವ್ಯಕ್ತಿಗೆ ಖಾತೆ ಮಾಡಿಕೊಡದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮುಖ್ಯಾಧಿಕಾರಿ ಎಸ್.ಸತ್ಯನಾರಾಯಣರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸತ್ಯನಾರಾಯಣರಾವ್, ಮೇಲಧಿಕಾರಿ ಗಳ ಗಮನಕ್ಕೆ ತಂದು ಅವರ ಸೂಚನೆ ಮೇರೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಉಮೇಶ್, ಮಾಜಿ ಉಪಾಧ್ಯಕ್ಷ ಎಂ.ನಾಗೇಶ್, ಎ.ನಾಗೇಶ್, ಮಾಜಿ ಸದಸ್ಯ ಎಚ್.ಎಸ್.ಬಿಂದು, ಆರ್.ರಮೇಶ್, ಡಣಾಯಕಪುರದ ಪರಮೇಶ್ವರಪ್ಪ ಗೌಡ, ಎನ್.ಚಂದ್ರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.