ADVERTISEMENT

ರಿಪ್ಪನ್‌ಪೇಟೆ: ಗೃಹ ಸಚಿವ ಆರಗ ಕಾರು ತಡೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 4:37 IST
Last Updated 15 ಏಪ್ರಿಲ್ 2022, 4:37 IST
ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಾಹನ ತಡೆಯಲು ಯತ್ನಿಸಿದರು
ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಾಹನ ತಡೆಯಲು ಯತ್ನಿಸಿದರು   

ರಿಪ್ಪನ್‌ಪೇಟೆ:ಪಟ್ಟಣದ ವಿನಾಯಕ ವೃತ್ತದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಮಾರ್ಗವಾಗಿ ಶಿರಸಿಗೆಗೆ ಹೋಗುತ್ತಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ವಾಹನಕ್ಕೆ ತಡೆ ಹಾಕಲು ಮುಂದಾದರು.

ಪೊಲೀಸರು ಪ್ರತಿಭಟನಕಾರರು ವಾಹನ ತಡೆ ಯತ್ನವನ್ನು ವಿಫಲಗೊಳಿಸಿದರು.

ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಬಿ.ಜಿ. ನಾಗರಾಜ್ ಮಾತನಾಡಿ, ‘ಸಚಿವ ಕೆ.ಎಸ್. ಈಶ್ವರಪ್ಪ ಅವರ ಬೆದರಿಕೆಗೆ ಹೆದರಿ ಸಂತೋಷ್‌ ಪಾಟೀಲ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮಾಜಿಸದಸ್ಯ ಬಂಡಿ ರಾಮಚಂದ್ರ ಮಾತನಾಡಿದರು. ಕಾಂಗ್ರೆಸ್‌ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ವಿ. ಈಶ್ವರಪ್ಪಗೌಡ, ಅಮೀರ್‌ ಹಂಜಾ, ಹೋಬಳಿ ಘಟಕದ ಅಧ್ಯಕ್ಷ ಆಸಿಫ್‌, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್. ಚಂದ್ರೇಶ್, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಂ.ಎಂ. ಪರಮೇಶ್, ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಸ್ಥಳೀಯ ಮುಖಂಡರುಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.