ADVERTISEMENT

ಜೇನು ಕೃಷಿ ಲಾಭದಾಯಕ ಉದ್ಯಮ: ಗೌತಮ್ ಬಿಚ್ಚುಗತ್ತಿ ಅನಿಸಿಕೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2024, 15:23 IST
Last Updated 11 ಡಿಸೆಂಬರ್ 2024, 15:23 IST
ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಈಚೆಗೆ ಆಯೋಜಿಸಿದ್ದ ಗುಂಪು ಚರ್ಚೆ ಮತ್ತು ಪ್ರಾತ್ಯಕ್ಷಿಕೆಯಲ್ಲಿ ಜೇನು ಕೃಷಿಕ ಗೌತಮ್ ಬಿಚ್ಚುಗತ್ತಿ ಮಾತನಾಡಿದರು
ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಈಚೆಗೆ ಆಯೋಜಿಸಿದ್ದ ಗುಂಪು ಚರ್ಚೆ ಮತ್ತು ಪ್ರಾತ್ಯಕ್ಷಿಕೆಯಲ್ಲಿ ಜೇನು ಕೃಷಿಕ ಗೌತಮ್ ಬಿಚ್ಚುಗತ್ತಿ ಮಾತನಾಡಿದರು   

ಶಿಕಾರಿಪುರ: ಜೇನು ಕೃಷಿ ಲಾಭದಾಯಕ ಉದ್ಯಮವಾಗಿದೆ ಎಂದು ಜೇನು ಕೃಷಿಕ ಗೌತಮ್ ಬಿಚ್ಚುಗತ್ತಿ ತಿಳಿಸಿದರು.

ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಬಿಎಸ್ಸಿ ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾಯಾ೯ನುಭವ ಕಾಯ೯ಕ್ರಮದ ಅಡಿ ‘ಜೇನು ಕೃಷಿ’ ಕುರಿತು ಆಯೋಜಿಸಿದ್ದ ಗುಂಪು ಚರ್ಚೆ ಮತ್ತು ಪ್ರಾತ್ಯಕ್ಷಿಕೆಯಲ್ಲಿ ಅವರು ಮಾತನಾಡಿದರು.

ತೋಟಗಳಲ್ಲಿ ಜೇನು ಸಾಕಾಣಿಕೆಯಿಂದ ವಿವಿಧ ಜೇನು ಉತ್ಪನ್ನಗಳು ಸಿಗುವುದಲ್ಲದೇ ಜೇನುಗಳ ಪರಾಗಸ್ಪರ್ಶ ಕ್ರಿಯೆಯಿಂದ ಕೃಷಿಯ ಇಳುವರಿಯೂ ಹೆಚ್ಚುತ್ತದೆ. ಜೇನುಪೆಟ್ಟಿಗೆ ಖರೀದಿಗೆ ಸರ್ಕಾರದಿಂದ ಸಬ್ಸಿಡಿ ಕೂಡ ದೊರೆಯುತ್ತದೆ. ಕಲಬೆರಕೆ ಜೇನುತುಪ್ಪದ ಬಗ್ಗೆ ಜನರು ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದರು.

ADVERTISEMENT

ಜೇನು ಕೃಷಿಗೆ ಅಗತ್ಯ ಉಪಕರಣಗಳನ್ನು ಪ್ರದರ್ಶಿಸಲಾಯಿತು. ಜೇನು ಕೃಷಿಯ ಖಚು೯ ವೆಚ್ಚ, ತೊಂದರೆಗಳು, ನಿವ೯ಹಣಾ ಕ್ರಮಗಳು, ಪಾಲಿಸಬೇಕಾದ ನಿಯಮಗಳ ಕುರಿತು ಜನರಿಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.