
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಹೊಸನಗರ: ತಾಲ್ಲೂಕಿನ ಬೈಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾರಿಡಾರ್‌ನಲ್ಲಿ ವ್ಯಕ್ತಿ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ.
ಮೃತರನ್ನು ಬೈಸೆ ಗ್ರಾಮದ ರಾಕೇಶ್ (28) ಎಂದು ಗುರುತಿಸಲಾಗಿದೆ.
ಯುವಕ ರಾಕೇಶ್ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಶನಿವಾರ ಬೆಳಿಗ್ಗೆ ವಿದ್ಯಾರ್ಥಿಗಳು ಶಾಲೆಗೆ ಬಂದಾಗ ಮೃತ ದೇಹ ಕಂಡು ಭಯಗೊಂಡಿದ್ದರು. ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.
ರಾಕೇಶ್ ಶುಕ್ರವಾರ ಸಂಜೆ ಮನೆಯಿಂದ ಕಾಣೆಯಾಗಿದ್ದು ಪೋಷಕರು ಹುಡುಕುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.