
ಹೊಸನಗರ: ‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಅರ್ಹ ಮತದಾರರನ್ನು ಕೈಬಿಡುವಂತಹ ಪ್ರಕ್ರಿಯೆಯಾಗಿದ್ದು, ಅವೈಜ್ಞಾನಿಕವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಆರೋಪಿಸಿದರು.
‘ಮತದಾರರ ಪಟ್ಟಿ ಪರಿಷ್ಕರಣೆಯು ಪಾರದರ್ಶಕವಾಗಿಲ್ಲ. ಇದು ಮತದಾರರಲ್ಲಿ ಗೊಂದಲ ಮತ್ತು ಸಂಶಯವನ್ನು ಉಂಟು ಮಾಡುತ್ತಿದೆ. ಈ ಪ್ರಕ್ರಿಯೆ ಲಕ್ಷಾಂತರ ಮತದಾರರ ಹಕ್ಕನ್ನು ಕಸಿದುಕೊಳ್ಳುತಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.
‘ಈ ಪ್ರಕ್ರಿಯೆ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ರೀತಿಯ ಪ್ರಚಾರ ನೀಡದೆ, ಸರ್ಕಾರಿ ಅಧಿಕಾರಿಗಳ ಮೂಲಕ ಕೆಲಸ ನಿರ್ವಹಿಸುತ್ತಿದೆ. ಒಬ್ಬ ಮತದಾರ ಕೂಡ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು. ಈ ನಿಟ್ಟಿನಲ್ಲಿ ಈಗಾಗಲೇ ಕಾಂಗ್ರೆಸ್ ಪಕ್ಷ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಚಾರ ಕೈಗೊಂಡು ಮತದಾರರಿಗೆ ಮಾಹಿತಿ ನೀಡುತ್ತಿದೆ. ಮತದಾರರು ತಾಲ್ಲೂಕಿನ ಸಂಬಂಧಪಟ್ಟ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬೇಕು’ ಎಂದರು.
ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಗೌಡ, ಪ್ರಧಾನ ಕಾರ್ಯದರ್ಶಿ ಎಂ.ಪಿ. ಸುರೇಶ್, ಬಾಳೆಕೊಪ್ಪ ಗಣೇಶ್, ಜಯನಗರ ಗುರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.