ಹೊಸನಗರ: ಪೌರ ಸೇವಾ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿ ಸೌಲಭ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸ್ಥಳೀಯ ಪಟ್ಟಣ ಪಂಚಾಯತಿಯ ಪೌರ ನೌಕರರು ಶುಕ್ರವಾರ ಪಟ್ಟಣ ಪಂಚಾಯತಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ.
ರಾಜ್ಯ ಪೌರಸೇವಾ ನೌಕರರ ಹಲವಾರು ಬೇಡಿಕೆಗಳು ದಶಕಗಳಿಂದ ಬಾಕಿ ಉಳಿದಿದ್ದು, ಈ ಬೇಡಿಕೆಗಳನ್ನು ಇದುವರೆಗೂ ಈಡೇರಿಸಿಲ್ಲ. ಈ ಕುರಿತಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದು ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಶಾಖಾ ಸಂಘದ ಅಧ್ಯಕ್ಷ ನಾಗಪ್ಪ, ಉಪಾಧ್ಯಕ್ಷ ನಾಗರಾಜ್ ಹಾಗೂ ಪೌರ ಸೇವಾ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.