ಹೊಸನಗರ: ನಾಶವಾಗಿರುವ ಪರಿಸರವನ್ನು ಮರುಸೃಷ್ಟಿ ಮಾಡಲು ಇನ್ನೂ ನೂರಾರು ತಲೆಮಾರುಗಳೇ ಬೇಕಾಗುತ್ತವೆ ಎಂದು ಪರಿಸರ ತಜ್ಞ ಚಕ್ರವಾಕ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಬಟ್ಟೆಮಲ್ಲಪ್ಪದ ವ್ಯಾಸ ಮಹರ್ಷಿ ಗುರುಕುಲದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭೂ ಸುಪೋಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂದಾಜಿಗೆ ಸಿಗದಷ್ಟು ತೀವ್ರಗತಿಯಲ್ಲಿ ಪರಿಸರ ನಾಶವಾಗುತ್ತಿದೆ. ಮುಂದಿನ ತಲೆಮಾರಿಗೆ ಪರಿಸರವನ್ನು ಚಿತ್ರದ ಮೂಲಕ ತೋರಿಸುವ ಪರಿಸ್ಥಿತಿ ಬರಲಿದೆ. ಇದು ಹಲವು ಆಯಾಮಗಳ ಸಮಸ್ಯೆಗಳನ್ನು ತಂದೊಡ್ಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಕ್ಕಳು ಈಗಿನಿಂದಲೇ ತಮ್ಮ ಮನೆ ಪರಿಸರವನ್ನಾದರೂ ಉಳಿಸಿಕೊಳ್ಳುವ ಕೆಲಸ ಆರಂಭಿಸಬೇಕು ಎಂದು ನಿವೃತ್ತ ಸೈನಿಕ ಕೆ. ಪಿ. ಕೃಷ್ಣಮೂರ್ತಿ ಹೇಳಿದರು.
ಪ್ರಗತಿಪರ ಕೃಿಷಿಕ ನಾಗರಾಜ್ ಮಾತನಾಡಿದರು. ವ್ಯಾಸ ಮಹರ್ಷಿ ಗುರುಕುಲ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಎಸ್. ಬ್ಯಾಣದ ಸ್ವಾಗತಿಸಿದರು. ಕಾರ್ಯದರ್ಶಿ ರಶ್ಮಿ ಬಿ. ಎಚ್. ವಂದಿಸಿದರು. ಹಿರಿಯ ಶಿಕ್ಷಕಿ ಶಿವಲೀಲಾ, ಪವಿತ್ರಾ ಹಾಗೂ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.