ADVERTISEMENT

ಶಿಕ್ಷಕ ವೃತ್ತಿ ದೇಶಕ್ಕೆ ಮಾದರಿ: ಶಾಸಕ ಬೇಳೂರು

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 13:45 IST
Last Updated 6 ಸೆಪ್ಟೆಂಬರ್ 2024, 13:45 IST
ಹೊಸನಗರದ ಈಡಿಗರ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು
ಹೊಸನಗರದ ಈಡಿಗರ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು   

ಹೊಸನಗರ: ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ನಿವೃತ್ತಿ ಬಳಿಕವೂ ಶಿಕ್ಷಕರನ್ನು ಇಡೀ ಸಮಾಜ ಅತ್ಯಂತ ಗೌರವಯುತವಾಗಿ ಕಾಣಲು ಅವರ ಶಿಸ್ತುಬದ್ಧ  ಜೀವನ ಶೈಲಿ, ಆಳ ಅಧ್ಯಯನವೇ ಕಾರಣ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಪಟ್ಟಣದ ಈಡಿಗ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಸರ್ಕಾರಿ ಹಾಗೂ ಖಾಸಗಿ ವಲಯದ 23 ಶಾಲೆಗಳು ಶೇ 100 ಫಲಿತಾಂಶ ದಾಖಲಿಸಿರುವುದು ಸಂತಸದ ಸಂಗತಿ ಎಂದರು. 

ADVERTISEMENT

ಇಪ್ಪತೈದು ಶಿಕ್ಷಕರನ್ನು ಶಾಸಕ ಆರಗ ಜ್ಞಾನೇಂದ್ರ ಸನ್ಮಾನಿಸಿದರು. ವೇದಿಕೆಯಲ್ಲಿ ತಹಶೀಲ್ದಾರ್ ರಶ್ಮಿ, ಇಒ ನರೇಂದ್ರ ಕುಮಾರ್, ಬಿಇಒ ಎಚ್. ಆರ್. ಕೃಷ್ಣಮೂರ್ತಿ, ಬಿಆರ್‌ಸಿ ಸಮನ್ವಯಾಧಿಕಾರಿ ರಂಗನಾಥ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್, ಪಿ.ಎಂ.ಪೋಷಣ್ ಸಹಾಯಕ ನಿರ್ದೇಶಕ ಶೇಷಾಚಲನಾಯ್ಕ, ಮುಖ್ಯಾಧಿಕಾರಿ ಉಮೇಶ್ ಗುಡ್ಡದ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್, ಕಾರ್ಯದರ್ಶಿ ಪುಟ್ಟಸ್ವಾಮಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.