ADVERTISEMENT

ಹೊಸನಗರ ತಾಲ್ಲೂಕು 8ನೇ ಶರಣ ಸಾಹಿತ್ಯ ಸಮ್ಮೇಳನ ಇಂದು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2023, 14:40 IST
Last Updated 6 ಅಕ್ಟೋಬರ್ 2023, 14:40 IST

ಹೊಸನಗರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹೊಸನಗರ ಘಟಕ ವತಿಯಿಂದ ಹೊಸನಗರ ತಾಲ್ಲೂಕು 8ನೇ ಶರಣ ಸಾಹಿತ್ಯ ಸಮ್ಮೇಳನವು ದುಮ್ಮದಲ್ಲಿ ಶನಿವಾರ ನಡೆಯಲಿದೆ.

ಶನಿವಾರ ಬೆಳಿಗ್ಗೆ 8 ಗಂಟೆಗೆ ದ್ವಜಾರೋಹಣ ನಡೆಯಲಿದೆ. ನಂತರ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಬಿ.ಗೋವಿಂದಪ್ಪ ಅವರ ಮೆರವಣಿಗೆ ನಡೆಯಲಿದೆ. 

ಮಳಲಿ ಮಠದ ಗುರುನಾಗಭೂಷಣ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಗೋಷ್ಠಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎಂ. ಚನ್ನಬಸಪ್ಪಗೌಡ ವಹಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ವಿ. ರೇವಣಪ್ಪಗೌಡ ಪ್ರಸ್ತಾವಿಕ ಮಾತನಾಡಲಿದ್ದಾರೆ. ಜಿಲ್ಲಾಧ್ಯಕ್ಷ ಎಚ್.ಎನ್. ಮಹಾರುದ್ರ ಆಶಯ ನುಡಿ ಆಡಲಿದ್ದಾರೆ. ಸಮ್ಮೇಳನ ಅಧ್ಯಕ್ಷ ಬಿ.ಗೋವಿಂದಪ್ಪ ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. 

ADVERTISEMENT

ಮಾಜಿ ಶಾಸಕ ಬಿ. ಸ್ವಾಮಿರಾವ್, ತಹಶೀಲ್ದಾರ್ ರಾಕೇಶ್ ಬ್ರಿಟ್ಟೋ, ಜೇನಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಚಂದ್ರಪ್ಪ, ಉಪಾಧ್ಯಕ್ಷೆ ಅಕ್ಷತಾ ನಾಗರಾಜ್, ಶಶಿಧರ್ ನಾಯ್ಕ, ಎನ್.ಆರ್. ದೇವಾನಂದ್, ವಿನಯ್‌ ಕುಮಾರ್ ದುಮ್ಮಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು ಆಯೋಜನೆಗೊಂಡಿವೆ. ಸಂಜೆ ಸಮಾರೋಪ ಮತ್ತು ಶರಣ ಸಾಧಕರಿಗೆ ಸನ್ಮಾನ ನಡೆಯಲಿದೆ. ಸಾಹಿತಿ ಹನಿಯ ರವಿ ಸಮರೋಪ ಭಾಷಣ ಮಾಡಲಿದ್ದಾರೆ ಎಂದು ಪರಿಷತ್ ಕಾರ್ಯದರ್ಶಿ ಹ.ರು. ಗಂಗಾಧರಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.