ADVERTISEMENT

ಆಶ್ರಯ ಮನೆ ಹಂಚಿಕೆ: ಅರ್ಜಿ ಆಹ್ವಾನ

ಗೋಪಿಶೆಟ್ಟಿಕೊಪ್ಪ ಬಳಿ 19.23 ಎಕರೆಯಲ್ಲಿ ಜಿ2 ಮಾದರಿಯಲ್ಲಿ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 4:53 IST
Last Updated 7 ಜುಲೈ 2022, 4:53 IST
ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಿಸಿರುವ ಜಿ2 ಮಾದರಿಯ ಆಶ್ರಯ ಮನೆಗಳು
ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಿಸಿರುವ ಜಿ2 ಮಾದರಿಯ ಆಶ್ರಯ ಮನೆಗಳು   

ಶಿವಮೊಗ್ಗ: ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಹಾಗೂ ನಗರ ಆಶ್ರಯ ಸಮಿತಿ ತೀರ್ಮಾನದಂತೆ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ 19 ಎಕರೆ 23 ಗುಂಟೆ ಜಮೀನಿನಲ್ಲಿ ನಿರ್ಮಿಸಿರುವ ಜಿ+2 ಮಾದರಿ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚಲು ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್ Shivamogga citycorp.org ಇಲ್ಲಿ 18 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. (ಪುರುಷ ಅಭ್ಯರ್ಥಿಯಾಗಿದ್ದಲ್ಲಿ ಮಾಜಿ ಸೈನಿಕ, ಅಂಗವಿಕಲರು, ವಿಧುರ ಹಾಗೂ ಹಿರಿಯ ನಾಗರಿಕರು ಅಭ್ಯರ್ಥಿಯಾಗಿರಬೇಕು). ಜುಲೈ 31 ರವರೆಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಮೂಲಕ ನಿಗದಿತ ಶುಲ್ಕ ಪಾವತಿಸಲು ಆಗಸ್ಟ್ 7 ಕಡೆಯ ದಿನ.
ಸಾಮಾನ್ಯ ಹಾಗೂ ಪ್ರವರ್ಗ 1, 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅರ್ಜಿದಾರರಿಗೆ ಅರ್ಜಿ ಶುಲ್ಕ ₹200, ಇಎಂಡಿ ಮೊತ್ತ ₹8000.

ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಅರ್ಜಿದಾರರಿಗೆ ಅರ್ಜಿ ಶುಲ್ಕ ₹100, ಇಎಂಡಿ ₹5000. ಒಟ್ಟು ₹5100 ಶುಲ್ಕವನ್ನು ಶಿವಮೊಗ್ಗ ನಗರದ ಕೆನರಾ ಬ್ಯಾಂಕ್‍ನ ಎಲ್ಲಾ ಶಾಖೆಗಳಲ್ಲಿ/ಬ್ಯಾಂಕ್ ಆಫ್ ಬರೋಡಾದ ಎಸ್.ಆರ್.ಶಾಖೆಗಳಲ್ಲಿ/ಇಂಡಿಯನ್ ಬ್ಯಾಂಕ್‍ನ ಮಹಾನಗರಪಾಲಿಕೆ ಶಾಖೆ ಹಾಗೂ ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ನಗದು ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.

ADVERTISEMENT

ಅರ್ಜಿದಾರರು ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಿರಬೇಕು. ಅರ್ಜಿದಾರ ಮತ್ತು ಅವರ ಕುಟುಂಬದವರು ಸ್ವಂತ ನಿವೇಶನ/ಮನೆ ಹೊಂದಿರಬಾರದು. ಬೇರೆ ಯಾವುದೇ ಯೋಜನೆಯಡಿ ನಿವೇಶನ/ವಸತಿ ಸೌಲಭ್ಯ ಪಡೆದಿರಬಾರದು. ಅರ್ಜಿದಾರರ ವಾರ್ಷಿಕ ಆದಾಯ ₹86,000ಕ್ಕಿಂತ ಕಡಿಮೆ ಇರಬೇಕು. ಲಿಂಗತ್ವ ಅಲ್ಪಸಂಖ್ಯಾತರು ಸಹ ಅರ್ಜಿ ಸಲ್ಲಿಸಬಹುದು ಎಂದು ಶಿವಮೊಗ್ಗ
ನಗರ ಆಶ್ರಯ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.