
ಪ್ರಜಾವಾಣಿ ವಾರ್ತೆ
ಹುಲಿಕಲ್ ಘಾಟ್‌ನಲ್ಲಿ ಧರೆಗೆ ಗುದ್ದಿದ ಬಸ್
ಹೊಸನಗರ: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ದುರ್ಗಾಂಬ ಬಸ್ ಹುಲಿಕಲ್ ಘಾಟಿಯಲ್ಲಿ ರಸ್ತೆ ಪಕ್ಕದ ಗುಡ್ಡಕ್ಕೆ ಗುದ್ದಿದ ಪರಿಣಾಮ ಮಗು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡವರಲ್ಲಿ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಘಟನೆ ನಡೆಯುತ್ತಿದ್ದಂತೆ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.