ADVERTISEMENT

ಹೊಸನಗರ | ಅಪಘಾತದಲ್ಲಿ ಪತಿ ಸಾವು; ಮನನೊಂದ ಪತ್ನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2025, 15:28 IST
Last Updated 1 ಜನವರಿ 2025, 15:28 IST
<div class="paragraphs"><p>ಸಾವು&nbsp;(ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ಹೊಸನಗರ: ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಾ ಕಾಲೊನಿ ನಿವಾಸಿ ಮಂಜುನಾಥ ಎಂಬವರು ಬೈಕ್ ಅಪಘಾತದಲ್ಲಿ ಮೃತಪಟ್ಟ ವಿಷಯ ತಿಳಿದು, ಅವರ ಪತ್ನಿ ಅಮೃತಾ (21) ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬುಧವಾರ ನಡೆದಿದೆ.

ಡಿ.31ರಂದು ಬೈಕ್‌ನಲ್ಲಿ ಶಿಕಾರಿಪುರಕ್ಕೆ ತೆರಳಿದ್ದ ಮಂಜುನಾಥ (25) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬುಧವಾರ ಬೆಳಿಗ್ಗೆ ಅವರು ಮೃತಪಟ್ಟಿದ್ದರು. 

ADVERTISEMENT

ಪತಿಯ ಸಾವಿನ ವಿಷಯ ತಿಳಿದ ಪತ್ನಿ ಅಮೃತಾ, ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೈಸೂರು ಮೂಲದ ಅಮೃತಾ ಅವರನ್ನು ಮಂಜುನಾಥ ಪ್ರೀತಿಸಿ ಮದುವೆಯಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಹೊಸನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.