ಶಿವಮೊಗ್ಗ: ತಮ್ಮ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸುವ ವಿಶ್ವಾಸವಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, 'ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ಕೊಡಬೇಕು. ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೆನು' ಎಂದರು.
ಆದರೆ ಸಿದ್ದರಾಮಯ್ಯ ಎಲ್ಲಿ ತಮ್ಮ ಪತ್ನಿ ಹೆಸರನ್ನು ಪ್ರಕರಣದಲ್ಲಿ ಸೇರಿಸಿಬಿಡುತ್ತಾರೋ ಅಂತಾ ಅನುಮಾನವಿದೆ. ಪಾಪ ಅವರು ಗೌರಮ್ಮನ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬರದೇ ಇರಲಿ ಎಂಬುದಾಗಿ ದೇವರಲ್ಲಿ ಬೇಡಿಕೊಳ್ಳುತ್ತೇನೆ' ಎಂದು ಹೇಳಿದರು.
'ಸಿದ್ದರಾಮಯ್ಯ ಕಾನೂನು ಬದ್ದವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಪಡೆದು ಪ್ರಕರಣದಿಂದ ಯಶಸ್ವಿಯಾಗಿ ಹೊರಗೆ ಬರಲಿ' ಎಂದು ಆಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.