ADVERTISEMENT

ಅಕ್ರಮ ಗೋಮಾಂಸ ಮಾರಾಟ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 3:23 IST
Last Updated 4 ಏಪ್ರಿಲ್ 2022, 3:23 IST

ಆನಂದಪುರ: ಸಮೀಪದ ಗೌತಮ್ ಪುರದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರುಬಂಧಿಸಿದ್ದಾರೆ.

ಗೌತಮಪುರದ ತಮಿಳು ಕಾಲೊನಿಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಸಂಬಂಧಶಿಕಾರಿಪುರದ ಹಬೀಬ್ ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಗೋಮಾಂಸ ಮಾರಾಟ ಸಂಬಂಧ ಸ್ಥಳೀಯರೇ ಹಬೀಬ್‌ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. 7 ಕೆ.ಜಿ. ಗೋಮಾಂಸ ಇತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.