
ತೀರ್ಥಹಳ್ಳಿಯಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣೆಗೆ ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸಿದ ಅರಣ್ಯ ಇಲಾಖೆ
ತೀರ್ಥಹಳ್ಳಿ: ಮಂಡಗದ್ದೆ ಸಮೀಪದ ಕಣಗಲುಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೋಮವಾರ ಅರಣ್ಯ ಇಲಾಖೆ ಬಂಧಿಸಿದ್ದಾರೆ. 33 ಕೆಜಿ 250 ಗ್ರಾಂ ಶ್ರೀಗಂಧದ ತುಂಡುಗಳನ್ನು ಸಾಗಾಣೆಗೆ ಯತ್ನಿಸುತ್ತಿದ್ದ ಗ್ರಾಮದ ಸತೀಶ್ (32), ಪ್ರಕಾಶ್ (32) ಬಂಧಿತರು.
ಮೇಲಿನ ಪಟ್ರೊಳ್ಳಿ ಗ್ರಾಮದ ಸರ್ವೆ ನಂಬರ್ 6ರಲ್ಲಿ ಶ್ರೀಗಂಧದ ಮರ ಕಡಿದು ಅಕ್ರಮವಾಗಿ ತುಂಡುಗಳನ್ನು ಸಂಗ್ರಹಿಸಲಾಗಿತ್ತು. ಸಂಗ್ರಹಿಸಿಟ್ಟ ತುಂಡುಗಳನ್ನು ಮಾರಾಟ ಮಾಡುವ ಯತ್ನದಲ್ಲಿದ್ದ ಆರೋಪಿಗಳನ್ನು ಖಚಿತ ಮಾಹಿತಿಯ ಮೇರೆಗೆ ಮಂಡಗದ್ದೆ ವಲಯಾರಣ್ಯಾಧಿಕಾರಿ ವಿನಯಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಡಿಎಫ್‌ಒ ಅಜ್ಜಯ್ಯ, ಎಸಿಎಫ್ ಮಧುಸೂದನ್ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾರ್ಯಚರಣೆಯಲ್ಲಿ ಡಿಆರ್‌ಎಫ್‌ಓ ಅಮಿತ್, ಅರಣ್ಯ ರಕ್ಷಕ ಸಿಬ್ಬಂದಿಗಳಾದ ಕಿರಣಕುಮಾರ್, ಮಹಾದೇವ್, ಚಾಲಕ ಅರುಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.