ADVERTISEMENT

ಸೇವೆ ಕಾಯಂಗೆ ಪೌರಕಾರ್ಮಿಕರ ಒತ್ತಾಯ

ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರ ಭೇಟಿ: ಮುಷ್ಕರಕ್ಕೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 2:08 IST
Last Updated 3 ಜುಲೈ 2022, 2:08 IST
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರು ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಾರಣ ಶಿವಮೊಗ್ಗದ ತಿಲಕ್ ನಗರದಲ್ಲಿ ಕಂಡುಬಂದ ಕಸದ ರಾಶಿ
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರು ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಾರಣ ಶಿವಮೊಗ್ಗದ ತಿಲಕ್ ನಗರದಲ್ಲಿ ಕಂಡುಬಂದ ಕಸದ ರಾಶಿ   

ಶಿವಮೊಗ್ಗ: ಕೆಲಸ ಕಾಯಂ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿವಮೊಗ್ಗ ಮಹಾನಗರ ಪಾಲಿಕೆಯ ನೇರ ಪಾವತಿ ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ನಗರದ ಹಳೆ ಜೈಲ್ ಬಳಿಯ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭವಾಗಿದೆ.

ರಾಜ್ಯ ಸಂಘದ ಕರೆಯ ಮೇರೆಗೆ ಧರಣಿಯಲ್ಲಿ ಪೌರ ಕಾರ್ಮಿಕರು ಪಾಲ್ಗೊಂಡಿದ್ದಾರೆ. ಅವರ ಜೊತೆಗೆ ಹೊರಗುತ್ತಿಗೆ ಕಸದ ವಾಹನ ಚಾಲಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಹೆಲ್ಪರ್ಸ್, ಮನೆ ಮನೆ ಕಸ ಸಂಗ್ರಹಿಸುವ ಪೌರ ಕಾರ್ಮಿಕರು ಮತ್ತು ಪಾಲಿಕೆಯ ವಾಹ ಚಾಲಕರು ಧರಣಿಯಲ್ಲಿ ಪಾಲ್ಗೊಂಡರು.

ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪೌರಕಾರ್ಮಿಕರ ಪ್ರತಿಭಟನೆಗೆ ಬೆಂಬಲ
ಸೂಚಿಸಿದರು.

ADVERTISEMENT

ಕಾರ್ಮಿಕ ಮುಖಂಡರಾದ ಪೆಂಚಾಲಯ್ಯ, ನಾಗರಾಜ್, ರವೀಶ್, ನರಸಿಂಹಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.