ಶಿಕಾರಿಪುರ: ‘ಪ್ರಾಣವನ್ನೂ ಲೆಕ್ಕಿಸದೆ ದೇಶದ ಗಡಿ ಹಾಗೂ ನಾಗರಿಕರನ್ನು ಕಾಯುತ್ತಿರುವ ಸೈನಿಕರನ್ನು ಗೌರವಿಸಿ ಹುರಿದುಂಬಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ತಿರಂಗಾ ಯಾತ್ರೆಯಲ್ಲಿ ಅವರು ಮಾತನಾಡಿದರು.
‘ಪಕ್ಷದ ವರಿಷ್ಠರ ತೀರ್ಮಾನದಂತೆ ಮೇ 23ರವರೆಗೆ ರಾಜ್ಯದ ಎಲ್ಲ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ನಡೆಸಲಾಗುತ್ತಿದೆ. ಅದರಲ್ಲಿ ಎಲ್ಲ ನಾಗರಿಕರು ಪಕ್ಷ, ಜಾತಿ, ಭೇದ ಮರೆತು ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಕಾಲು ಕೆದರಿ ಜಗಳಕ್ಕೆ ಬಂದಿತ್ತು. ಅದಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೈನಿಕರ ಮೂಲಕ ತಕ್ಕ ಉತ್ತರ ನೀಡಿದೆ. ನದಿ ನೀರು ಹರಿಸದೆ, ಮತ್ತೊಂದೆಡೆ ಹೆಚ್ಚು ನೀರು ಹರಿಸುವ ಮೂಲಕ ನಮ್ಮ ದೇಶದ ಮಹತ್ವವನ್ನು ಪಾಕಿಸ್ತಾನಕ್ಕೆ ತೋರಿಸುವ .
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.