ADVERTISEMENT

ಜೆಎನ್‌ಎನ್‌ಸಿಇ: ಐಟಿ ಬಿಯಾಂಡ್ ಬೆಂಗಳೂರು ಫೆ.28ಕ್ಕೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 4:33 IST
Last Updated 26 ಫೆಬ್ರುವರಿ 2026, 4:33 IST
   

ಶಿವಮೊಗ್ಗ: ‘ನಗರದ ಜೆಎನ್‌ಎನ್‌ಸಿಇ ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಫೆ. 28ರಂದು ಬೆಳಿಗ್ಗೆ 10.30ಕ್ಕೆ ಐಟಿ ಬಿಯಾಂಡ್ ಬೆಂಗಳೂರು ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (ಎಫ್‌ಕೆಸಿಸಿಐ) ಬೆಂಗಳೂರು ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.‌

ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಉಪಾಧ್ಯಕ್ಷ ಸಾಯಿ ರಾಮ್ ಪ್ರಸಾದ್, ಮಾಹಿತಿ ತಂತ್ರಜ್ಞಾನ ವಿಭಾಗದ ಅಧ್ಯಕ್ಷ ಎಚ್.ಎ.ಕಿರಣ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಉಪಾಧ್ಯಕ್ಷ ಚೇತನ್ ದೀಕ್ಷಿತ್ ಅತಿಥಿಗಳಾಗಿ ಭಾಗವಹಿಸುವರು ಎಂದರು.

ADVERTISEMENT

ಫೆ. 28ರ ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ‘ಮಂಥನ್ 2026’ ಎಂಬ ಕೃತಕ ಬುದ್ಧಿಮತ್ತೆ ಕುರಿತ ಉಪನ್ಯಾಸ, ಚರ್ಚೆ ಮತ್ತು ಪ್ರಶ್ನೋತ್ತರ ಕಾರ್ಯಕ್ರಮ ನಡೆಯಲಿದೆ. ಎಐ ಪರಿಣಿತರಾದ ಕೃಪೇಶ್ ಮತ್ತು ರಾಜೀವ್ ದೀಕ್ಷಿತ್ ಉಪನ್ಯಾಸ ನೀಡುವರು. ಅಶೋಕ್ ಭಟ್, ಸುರೇಶ್ ಕುಮಾರ್, ಅಮಿತ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು ಎಂದರು.

ಜಿ.ವಿಜಯಕುಮಾರ್, ಎ.ಎಂ.ಸುರೇಶ್, ಆರ್.ಮನೋಹರ್, ಎಸ್.ಎಸ್. ಉದಯ್ ಕುಮಾರ್, ಗಣೇಶ್ ಎಂ. ಅಂಗಡಿ, ಜಿ.ವಿ.ಕಿರಣ್ ಕುಮಾರ್, ರವಿಪ್ರಕಾಶ್ ಜನ್ನೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.