ಜೋಗ ಜಲಪಾತ
ಶಿವಮೊಗ್ಗ: ಜಿಲ್ಲೆಯ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಏಪ್ರಿಲ್ 30ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಮುಖ್ಯದ್ವಾರದ ಕಾಮಗಾರಿ ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲರೂ ಸಹಕರಿಸಬೇಕು ಎಂದು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.