ಶಿವಮೊಗ್ಗ: ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ ಎಂದು ಹೇಳಿ ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ‘ರಾಷ್ಟ್ರಗೀತೆ’ಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಹಾಗೂ ಸಂಸದ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಎನ್ ಎಸ್ ಯುಐ ಸಂಘಟನೆ ವತಿಯಿಂದ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯದ ಶಿಕ್ಷಣ ಸಚಿವರಾಗಿದ್ದವರು. ವಿಧಾನಸಭೆಯ ಸ್ಪೀಕರ್ ಹುದ್ದೆಯಂತಹ ಸಾಂವಿಧಾನಿಕ ಹುದ್ದೆ ನಿಭಾಯಿಸಿದ್ದವರು. ಆದರೆ, ಸಂಸದರಾಗಿ ಜನರಲ್ಲಿ ರಾಷ್ಟ್ರಗೀತೆ, ಸಂವಿಧಾನಗಳ ಬಗ್ಗೆ ಗೌರವ ಭಾವನೆ ಮೂಡಿಸುವಂತಹ ಮಾತುಗಳನ್ನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಜವಳಿ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಚೇತನ್, ಯುವ ಮುಖಂಡ ಮಧುಸೂದನ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಡ್ಡು, ಎನ್ಎಸ್ ಯುಐ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರ ಅಧ್ಯಕ್ಷ ರವಿ ಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.