ಕಾಗೋಡು ತಿಮ್ಮಪ್ಪ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ
ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಭೌತ ವಿಜ್ಞಾನಿ ಮುಂಬೈನ ಪ್ರೊ.ಸಿ.ಎಸ್.ಉನ್ನಿಕೃಷ್ಣನ್ ಹಾಗೂ ಯೋಗಗುರು ಭದ್ರಾವತಿಯ ಡಿ.ನಾಗರಾಜ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಇದೇ ವೇಳೆ ರಾಜ್ಯಪಾಲರು 98 ಮಂದಿ ರ್ಯಾಂಕ್ ವಿಜೇತರಿಗೆ 146 ಚಿನ್ನದ ಪದಕ ಹಾಗೂ 17 ನಗದು ಬಹುಮಾನ ವಿತರಿಸಿದರು.
ಘಟಿಕೋತ್ಸವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪೂರ್ಣಗೊಳಿಸಿದ 18,885 ವಿದ್ಯಾರ್ಥಿಗಳು ಪದವಿ ಪಡೆದರು.
ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಘಟಿಕೋತ್ಸವ ಭಾಷಣ ಮಾಡಿದರು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.