ಶಿವಮೊಗ್ಗ: ಇಲ್ಲಿನ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ಹಾಸ್ಟೆಲ್ ಜಾಗದಲ್ಲಿ ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕನಕದಾಸ ಸಮುದಾಯ ಭವನ ನಿರ್ಮಾಣಕ್ಕೆ ನ. 30ರ ಬೆಳಿಗ್ಗೆ 10.30ಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪ್ರಸನ್ನಕುಮಾರ್ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮುದಾಯ ಭವನ ನಿರ್ಮಾಣ ಮಾಡಬೇಕು ಎಂಬುದು ಸಂಘದ ಬಹುದಿನದ ಕನಸಾಗಿತ್ತು. ಕಾಗಿನೆಲೆ ಕ್ಷೇತ್ರದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಜಡೇದೇವರ ಮಠದ ಸ್ವಾಮಿ ಅಮೋಘ ಸಿದ್ದೇಶ್ವರಾನಂದರು ಭೂಮಿ ಪೂಜೆಯ ಸಾನ್ನಿಧ್ಯ ವಹಿಸುವರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಬಲ್ಕೀಶ್ ಬಾನು, ಧನಂಜಯ ಸರ್ಜಿ, ಕುರುಬರ ಸಂಘದ ಅಧ್ಯಕ್ಷ ಪಿ. ಮೈಲಾರಪ್ಪ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್, ರಾಜ್ಯ ಕುರುಬರ ಸಂಘದ ಅಧ್ಯಕ್ಷ ಎಂ. ಈರಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಉಪಸ್ಥಿತರಿರುವರು ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ ಮಾತನಾಡಿ, ಬಹುದಿನಗಳ ಕನಸು ಈಗ ನನಸಾಗುವ ಕಾಲ ಬಂದಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೆ.ರಂಗನಾಥ್, ಮೂಡ್ಲಿ ರಾಮಕೃಷ್ಣ, ಶರತ್ ಮರಿಯಪ್ಪ, ಹನುಮಂತಪ್ಪ, ನವುಲೆ ಈಶ್ವರಪ್ಪ, ಹೊನ್ನಪ್ಪ, ಮಾಲತೇಶ್, ಪ್ರಭು, ಕೃಷ್ಣಮೂರ್ತಿ, ಪಾಲಾಕ್ಷಿ, ಇಕ್ಕೇರಿ ರಮೇಶ್, ಸಿದ್ದಪ್ಪ, ಲಕ್ಷ್ಮಣ್, ಗಣೇಶ್, ರಾಘವೇಂದ್ರ, ಕೇಶವ, ಚಂದ್ರಣ್ಣ, ಅನಿಲ್, ಚೇತನ್, ಮಧು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.