ADVERTISEMENT

ಕನ್ನಡ ಉಳಿಸಿ ಬೆಳೆಸಿ: ಕೋಗಲೂರು ತಿಪ್ಪೇಸ್ವಾಮಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 6:51 IST
Last Updated 3 ಡಿಸೆಂಬರ್ 2025, 6:51 IST
ಭದ್ರಾವತಿ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಈಚೆಗೆ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು
ಭದ್ರಾವತಿ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಈಚೆಗೆ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು   

ಭದ್ರಾವತಿ: ಬೆಂಗಳೂರಿನಂತಹ ಮಹಾನಗರಗಳಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆ ಆಗುತ್ತಿದ್ದು, ಹಳ್ಳಿಗಳಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ತಾಲೂಕಿನ ಯರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು.

ಈಚೆಗೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಮಾತನಾಡಿದರು.

ಮಹಾನಗರಗಳಲ್ಲಿ ಇಂಗ್ಲಿಷ್ ಮತ್ತು ಇತರೆ ಭಾಷೆಗಳ ಮೇಲಿನ ವ್ಯಾಮೋಹ ಅತಿಯಾಗುತ್ತಿದ್ದು, ಕನ್ನಡ ಮಾತನಾಡುವವರನ್ನು ಕೀಳಾಗಿ ಕಾಣುವ ಸಂಸ್ಕೃತಿ ಬೆಳೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ADVERTISEMENT

ಶುದ್ಧ ಓದು, ಬರಹ ರೂಢಿಸಿಕೊಂಡು ಕನ್ನಡ ಉಳಿಸಿ ಬೆಳೆಸಿ ಎಂದು ತಿಳಿಸಿದರು.

ಮುಖ್ಯ ಶಿಕ್ಷಕ ಮೈಲಾರಪ್ಪ, ಶಿಕ್ಷಕಿಯರಾದ ದೇವಕರಣಮ್ಮ, ಶೋಭಾ, ಲಿಂಗಮೂರ್ತಿ, ಕನ್ನಡ ಯುವಕ ಸಂಘದ ಪದಾಧಿಕಾರಿಗಳು, ಪ್ರಮುಖರಾದ ಅಶೋಕ್, ದಿವಾಕರ್, ಆನಂದ್, ಸೋಮಶೇಖರ್ ಮತ್ತು ವೆಂಕಟೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.