ADVERTISEMENT

ಯಡಿಯೂರಪ್ಪ ಉಪಸ್ಥಿತಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 12:17 IST
Last Updated 28 ಅಕ್ಟೋಬರ್ 2019, 12:17 IST

ಶಿವಮೊಗ್ಗ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನ.1ರಂದು ಬೆಳಿಗ್ಗೆ 9ಕ್ಕೆ ನಗರದ ಡಿಎಆರ್ ಮೈದಾನದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಧ್ವಜಾರೋಹಣ ಮಾಡುವರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಶಾಸಕರಾದ ಎಸ್.ಕುಮಾರ್ ಬಂಗಾರಪ್ಪ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಬಿ.ಕೆ.ಸಂಗಮೇಶ್ವರ, ಕೆ.ಬಿ. ಅಶೋಕ್ ನಾಯ್ಕ, ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ರುದ್ರೇಗೌಡ, ಸಿ.ಎಂ. ಇಬ್ರಾಹಿಂ, ಎಸ್.ಎಲ್. ಭೋಜೆಗೌಡ, ಮೇಯರ್ ಲತಾ ಗಣೇಶ್, ಡಿ.ಎಸ್. ಅರುಣ್ ಕುಮಾರ್, ಗೀತಾ ಜಯಶೇಖರ್ ಉಪಸ್ಥಿತರಿರುವರು.

ಬೆಳಿಗ್ಗೆ 8ಕ್ಕೆ ಭುವನೇಶ್ವರಿ ದೇವಿ ಮೆರವಣಿಗೆ ಸೈನ್ಸ್ ಮೈದಾನದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಬೆಳಿಗ್ಗೆ 9ಕ್ಕೆ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ. ಸಂಜೆ 5ಕ್ಕೆ ಕುವೆಂಪು ರಂಗಮಂದಿರದಲ್ಲಿ ಪೊಲೀಸ್ ಬ್ಯಾಂಡ್ ಪ್ರದರ್ಶನ, ನಗರದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮ. ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯಿಂದ ಪ್ರಾಯೋಜಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಮದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.